ಯಳ್ಳಂಬಳಸೆ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಸುದ್ದಿಕಡೂರು : ರಾಮಾಯಣದಲ್ಲಿ ಬಿಂಬಿತವಾಗಿರುವ ಹಲವಾರು ಅಂಶಗಳು ಸಮಾಜದ ಏಳಿಗೆಗೆ ಪೂರಕವಾಗಿ ದಾರಿದೀಪವಾಗಿದೆ. ಎಂದು ಯಳ್ಳಂಬಳಸೆ ಗ್ರಾಪಂ ಅಧ್ಯಕ್ಷ ಸೈಯಾದ್ ಸಲೀಂ ಅಭಿಪ್ರಾಯಿಸಿದರು.
ತಾಲ್ಲೂಕಿನ ಯಳ್ಳಂಬಳಸೆ ಗ್ರಾಮದ ಅಂತರಘಟ್ಟಮ್ಮ ದೇವಾಲಯದ ಆವರಣದಲ್ಲಿ ಗ್ರಾಪಂ ವತಿಯಿಂದ ಶನಿವಾರ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಮಾಯಣ ರಚಿಸಿದ ವಾಲ್ಮೀಕಿಯವರ ಜೀವನ ಕುರಿತು ಅನೇಕ ರೀತಿಯ ಉಲ್ಲೇಖಗಳಿಗೆ, ಆದರೆ ಅದರ ವಾಸ್ತವಿಕತೆಯನ್ನು ಅರಿಯಲು ಪ್ರಯತ್ನಿಸಬೇಕು. ರಾಮಾಯಣ ಮಹಾಕಾವ್ಯ ಪ್ರೀತಿ, ತ್ಯಾಗ, ಸಹನೆ, ಪ್ರಕೃತಿ ಸೌಂದರ್ಯ, ವಿರಹ ಹೀಗೆ ಹಲವಾರು ಅಂಶಗಳನ್ನು ಒಳಗೊಂಡಿದೆ. ವಾಲ್ಮೀಕಿಯವರು ನಾರದರ ಮಾತಿಗೆ ಪ್ರೇರೇಪಿತರಾಗಿ ಸಾಂಸಾರಿಕ ಸಾಂಗತ್ಯವನ್ನು ತೊರೆದು ತದೇಕಚಿತ್ತದಿಂದ ರಾಮಧ್ಯಾನವನ್ನು ಮಾಡಿ ಜ್ಞಾನವನ್ನು ಪಡೆದು ಇಂದಿಗೂ ಚಿರಸ್ಮರಣೀಯವಾಗಿರುವ ರಾಮಾಯಣ ಮಹಾಕಾವ್ಯವನ್ನು ರಚಿಸಿದರು. ಅದೇ ರೀತಿ ಪ್ರತಿಯೊಬ್ಬರು ಸಹ ಸನ್ಮಾರ್ಗದಲ್ಲಿ ನಡೆದು ಜೀವನದಲ್ಲಿ ಗುರಿಯನ್ನು ಸಾಧಿಸಬೇಕಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಶ್ರೀನಿವಾಸ್, ನವೀನ್, ಯಳಗೊಂಡನಹಳ್ಳಿ ಈಶ್ವರಪ್ಪ, ಸೋಮೇಶ್, ನಿವೃತ್ತ ಸೈನಿಕ ರಮೇಶ್, ವಾಲ್ಮೀಕಿ ಸಮಾಜದ ಮುಖಂಡರಾದ ನಾಗರಾಜ್, ಸುರೇಶ್ ಪಿಡಿಒ ವಸಂತ್ ಮತ್ತಿತರಿದ್ದರು.

Leave a Reply

Your email address will not be published. Required fields are marked *

error: Content is protected !!