ಕಾಮಗಾರಿಯ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆ ಇಲ್ಲ – ಕೆ.ಎಸ್. ಆನಂದ್

ಸುದ್ದಿ ಕಡೂರು: ಕಡೂರು ಪಟ್ಟಣವನ್ನು ನಗರಸಭೆಯನ್ನಾಗಿಸುವ ಪ್ರಕ್ರಿಯೆಗಳು ನಡೆಯುತ್ತಲಿದ್ದು,ಪಟ್ಟಣಕ್ಕೆ ಹೊಂದಿಕೊಂಡಿರುವ ಗ್ರಾಮಗಳ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.

ಪಟ್ಟಣದ ಹೊರವಲಯದಲ್ಲಿ ಬುಧವಾರ
ಕೆ.ಆರ್.ಐ.ಡಿ.ಎಲ್.  ಕಚೇರಿ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಇದೀಗ 50 ಲಕ್ಷ ಶಾಸಕರ ಅನುದಾನ ಬಂದಿದ್ದು ಹಲವಾರು ದೇವಸ್ಥಾನಗಳ ಸಮುದಾಯ ಭವನಗಳಿಗೆ ಅನುದಾನ ನೀಡಲಾಗಿದೆ. ಯಗಟಿಯಲ್ಲಿ ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ರೈತ ಸಂಪರ್ಕ ಕೇಂದ್ರ, ಹಲವು ಶಾಲೆ. ಹಾಸ್ಟೆಲ್ ಗಳ ದುರಸ್ತಿ ಮುಂತಾದ ಕೆಲಸಗಳನ್ನು ಈ ಇಲಾಖೆಯ ಮೂಲಕವೇ ಮಾಡಲಾಗುತ್ತದೆ. ರಾಜ್ಯಸಭಾ ಸದಸ್ಯ ಜೈರಾಂ ರಮೇಶ್ ಅವರು ನಮ್ಮ ಜಿಲ್ಲೆಯನ್ನು ನೋಡಲ್ ಜಿಲ್ಲೆಯಾಗಿ ಆಯ್ಕೆ ಮಾಡಿಕೊಂಡಿದ್ದು, ಕಡೂರು ತಾಲ್ಲೂಕಿಗೆ 1 ಕೋಟಿ ಅನುದಾನ ನೀಡಲು ಒಪ್ಪಿದ್ದಾರೆ.  ಈ ಜಾಗದಲ್ಲಿ ನಿರ್ಮಾಣವಾಗುವ ಕಚೇರಿ ಕಟ್ಟಡ ಗುಣಮಟ್ಟದಿಂದ ಕೂಡಿ ಇತರೆ ಕಚೇರಿಗಳಿಗೆ ಮಾದರಿಯಾಗಿರಲಿ. ಎಂದರು.
ಕ್ಷೇತ್ರದ ಅಭಿವೃದ್ಧಿಗೆ ಸದಾ ಶ್ರಮಿಸುತ್ತೇನೆ. ಶ್ರೀರಾಂ ಪುರ ಗ್ರಾಮದಲ್ಲಿ ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಒಂದಿಷ್ಟು ಸಮಸ್ಯೆಗಳಿದ್ದು, ಅವುಗಳ ಪರಿಹಾರಕ್ಕಾಗಿ ಕೂಡಲೇ ಕ್ರಮ ಕೈಗೊಳ್ಳುತ್ತೇನೆ ಎಂದರು.ಯಾವುದೇ ಕಾರಣಕ್ಕೂ ಕಾಮಗಾರಿಯಲ್ಲಿ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದರು.
ಪುರಸಭಾ ಸದಸ್ಯರಾದ ಕೆ.ಎಂ.ಮೋಹನ್ ಕುಮಾರ್, ಯಾಸೀನ್, ಈರಳ್ಳಿ ರಮೇಶ್,ಮರುಗುದ್ದಿ ಮನು, ಗ್ರಾಮಪಂಚಾಯಿತಿ ಉಪಾಧ್ಯಕ್ಷ ರಾಕೇಶ್, ಕೆ.ಆರ್.ಐ.ಡಿ.ಎಲ್ ನ ಎಕ್ಸಿಕ್ಯುಟಿವ್ ಇಂಜಿನಿಯರ್ ಅಶ್ವಿನಿ ಹಾಗೂ ಸಿಬ್ಬಂದಿ  ಇದ್ದರು.

Leave a Reply

Your email address will not be published. Required fields are marked *

error: Content is protected !!