ಮೂಡಿಗೆರೆ ಬಳಿ ಖಾಸಗಿ ಬಸ್ ಪ್ರಪಾತಕ್ಕೆ ಪಲ್ಟಿ- ಓರ್ವ ಮಹಿಳೆ ಸಾವು

ಸುದ್ದಿ ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪ್ರಪಾತಕ್ಕೆ ಉರುಳಿದ ಘಟನೆ ಶನಿವಾರ ಬೆಳಗಿನಜಾವ ನಡೆದಿದೆ. ಓರ್ವ ಮಹಿಳೆ ಸಾವು, ಐವರಿಗೆ ಗಂಭೀರ ಗಾಯಗಳಾಗಿದ್ದು ಮೂಡಿಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.ಮೂಡಿಗೆರೆ ತಾಲೂಕಿನ ಚೀಕನಹಳ್ಳಿ – ಕಸ್ಕೇಬೈಲು ಕ್ರಾಸ್ ಬಳಿ ದುರ್ಘಟನೆ ನಡೆದಿದೆ.ಸುರೇಖ (45), ಬೆಂಗಳೂರಿನ ಯಲಹಂಕ ನಿವಾಸಿ ಮೃತ ಮಹಿಳೆ ಎಂದು ಗುರುತಿಸಲಾಗಿದೆ.ಬೆಂಗಳೂರಿಂದ ಹೊರನಾಡಿಗೆ ಹೊರಟಿದ್ದ ಪ್ರವಾಸಿಗರು ಖಾಸಗಿ ಬಸ್ ನಲ್ಲಿ 48ಕ್ಕೂ ಹೆಚ್ಚು ಪ್ರವಾಸಿಗರು ಇದ್ದರು. ಬೆಂಗಳೂರು -ಹಾಸನ-ಮೂಡಿಗೆರೆ ಮಾರ್ಗವಾಗಿ ಹೊರನಾಡಿಗೆ ಹೋಗುತ್ತಿರುವಾಗ ಬೆಳಗಿನ ಜಾವ 4:45 ಸಮಯದಲ್ಲಿ  ಅಪಘಾತ ಘಟನೆ ಸಂಭವಿಸಿದೆ. ತಡೆ ಗೋಡೆ ನಿರ್ಮಿಸುವಂತೆ ಹತ್ತಾರು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ,ಇದೇ ಜಾಗದಲ್ಲಿ 20ಕ್ಕೂ ಹೆಚ್ಚು ಅಪಘಾತಗಳು ನಡೆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಸ್ಥಳೀಯರು ಅಕ್ರೋಶ ವ್ಯಕ್ತಪಡಿಸಿದರು. ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 

Leave a Reply

Your email address will not be published. Required fields are marked *

error: Content is protected !!