ಸುದ್ದಿ ಚಿಕ್ಕಮಗಳೂರು: ಜಿಲ್ಲೆಯ ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ರಾಜಕಾರಣಿ ಡಿ.ಬಿ.ಚಂದ್ರೇಗೌಡ(87) ತಡರಾತ್ರಿ 12.20 ಕ್ಕೆ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನಹೊಂದಿದರು.ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮೂಡಿಗೆರೆ ಪಟ್ಟಣದ ಅಡ್ಯಂತಾಯ ರಂಗದಮಂದಿರದಲ್ಲಿ ಡಿ.ಬಿ. ಚಂದ್ರೇಗೌಡರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಬುಧವಾರ ಮಧ್ಯಾಹ್ನ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ, ಕಾಂಗ್ರೆಸ್ ಕಟ್ಟಾಳು ಆಗಿದ್ದ ಚಂದ್ರೇಗೌಡರು ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಗೆ ಸೇರ್ಪಡೆಗೊಂಡಿದ್ದರು. ಕೇಂದ್ರ ಕಾನೂನು ಸಚಿವರಾಗಿ ಕಾರ್ಯನಿರ್ವಹಿಸಿದ್ದರು.