ಸುದ್ದಿ ಚಿಕ್ಕಮಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಜೀವಮಾನ ಸಾಧನೆ ಪ್ರಶಸ್ತಿ ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಕ್ರೀಡಾಪಟುಗಳು ಸೇವಾಸಿಂಧು ಆನ್ಲೈನ್ ನಲ್ಲಿ ನವೆಂಬರ್ 30 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯನ್ನು ಸಂಪರ್ಕಿಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗಾಗಿ ಅರ್ಜಿ : ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2023-24ನೇ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸಲ್ಲಿಸಲು ನವೆಂಬರ್ 30 ರಂದು ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿಯನ್ನು (ಮೊ.ಸಂ. 08262-295724) ಕಛೇರಿ ವೇಳೆಯಲ್ಲಿ ಸಂಪರ್ಕಿಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ೨೦೨೨ ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.