ಪೋಕ್ಸೋ ಪ್ರಕರಣದಡಿ ನ್ಯಾಯಾಂಗ ಬಂಧನದಲ್ಲಿದ್ದ ಮೂವರು ಆರೋಪಿಗಳನ್ನು ತನಿಖೆಗಾಗಿ ವಶಕ್ಕೆ ಪಡೆದ ಕಡೂರು ಪೊಲೀಸರು

ಸುದ್ದಿ ಕಡೂರು : ತಾಲ್ಲೂಕಿನ ವಸತಿ ಶಾಲೆಯೊಂದರಲ್ಲಿ ನಡೆದ ಘಟನೆಯಿಂದ ಪೋಕ್ಸೋ ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿ ಒಳಪಟ್ಟ ಮೂವರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಕಡೂರು ಪೊಲೀಸರು ಶುಕ್ರವಾರ ವಶಕ್ಕೆ ಪಡೆದು ತನಿಖೆಯ ಕಾರ್ಯಾಚರಣೆ ಕೈಗೊಂಡಿದ್ದಾರೆ. ತಾಲ್ಲೂಕಿನ ವಸತಿಶಾಲೆಯೊಂದರ ಅಪ್ರಾಪ್ತ ವಯಸ್ಸಿನ ಬಾಲಕಿಯರನ್ನು ಲೈಂಗಿಕವಾಗಿ ಬಳಿಸಿಕೊಂಡಿರುವ ಆರೋಪದಡಿಯಲ್ಲಿ ಆರೋಪಿಗಳಾದ ಎಂ.ಸಿ. ಚಂದನಾ, ಸಿ.ಜಿ. ಸುರೇಶ್, ವಿನಯ್‌ಕುಮಾರ್ ಬಂಧಿತ ಆರೋಪಿಗಳನ್ನು ನ.8ರಂದು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಬಳಿಕ ಘಟನೆಯ ಸ್ಥಳ ಮಹಜರು ಪ್ರಕ್ರಿಯೆ ಸೇರಿದಂತೆ ಉನ್ನತ ತನಿಖೆಯ ವಿಚಾರಣೆಗಾಗಿ ಮೂವರು ಆರೋಪಿಗಳನ್ನು ನಾಲ್ಕು ದಿನಗಳ ಕಾಲ ಪೊಲೀಸರು ವಶಕ್ಕೆ ಪಡೆದು ತನಿಖೆಯನ್ನು ಮುಂದುವರಿಸಲಿದ್ದಾರೆ ಎಂದು ಬಲ್ಲಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

error: Content is protected !!