17ಜನ ಅಸ್ವಸ್ಥಗೊಂಡ ಮರವಂಜಿ ಗ್ರಾಮಸ್ಥರು: ಕಡೂರು ಆಸ್ಪತ್ರೆಗೆ ದಾಖಲು

ಸುದ್ದಿ ಕಡೂರು : ತಾಲ್ಲೂಕಿನ ಮರವಂಜಿ ಗ್ರಾಮದ ಮನೆಯೊಂದರಲ್ಲಿ ನಡೆದ  ಕಾರ್ಯಕ್ರಮದಲ್ಲಿ 17 ಜನ ಗ್ರಾಮಸ್ಥರು ಸೋಮವಾರ ಪುಡ್ ಫಾಯಸ್ನ್ ಗೊಂಡ ಮಾಂಸಹಾರ ಸೇವಿಸಿ ಅಸ್ವಸ್ಥರಾಗಿದ್ದು,  ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮರವಂಜಿ ಗ್ರಾಮದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ತಯಾರಿಸಿದ ಬಿರಿಯಾನಿಯನ್ನು  ಸೋಮವಾರ ಕುಟುಂಬಸ್ಥರು ಹಾಗೂ ಕೆಲ ಗ್ರಾಮಸ್ಥರು  ಸೇವಿಸಿದ್ದಾರೆ. ಬಳಿಕ ವಾಂತಿ-ಭೇಧಿ ಕಾಣಿಸಿಕೊಂಡು ತೀವ್ರ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಂಬ್ಯುಲೆನ್ಸ್ ಸಹಾಯದಿಂದ ಕೂಡಲೇ ಸಾರ್ವಜನಿಕ ಆಸ್ಪತ್ರೆಗೆ  ಕರೆತಂದಿದ್ದಾರೆ.ತುರ್ತು ಘಟಕಕ್ಕೆ ಕರೆತಂದ ಗ್ರಾಮಸ್ಥರನ್ನು ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಎಸ್.ಎನ್. ಉಮೇಶ್ ಹಾಗೂ ದಾದಿಯರು ಸೂಕ್ತ ತಪಾಸಣೆ ನಡೆಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಯ ಮೂರು ಕೊಠಡಿಯಲ್ಲಿ ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ. ಭಾನುವಾರ ತಯಾರಿಸಿದ ಮಾಂಸಹಾರದಲ್ಲಿ ಸೋಮವಾರ ಪುಡ್ ಫಾಯಸ್ನ್ ಆಗಿದ್ದು, ಅದನ್ನೇ ಗ್ರಾಮಸ್ಥರು  ಸೇವಿಸಿದ್ದ ಹಿನ್ನೆಲೆಯಲ್ಲಿ ವಾಂತಿಭೇದಿ ಕಾಣಿಸಿಕೊಂಡಿದೆ. ಕೂಡಲೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಾಪಾಯಕ್ಕೆ ಯಾವುದೇ ತೊಂದರೆ ಇಲ್ಲ,  ದಾಖಲಾದ ಗ್ರಾಮಸ್ಥರ ಪೈಕಿ 8 ಪುರುಷರು ಹಾಗೂ ಮಕ್ಕಳು ಒಳಗೊಂಡಂತೆ 9ಜನ ಮಹಿಳೆಯರು ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಎಸ್.ಎನ್.ಉಮೇಶ್ ತಿಳಿಸಿದರು.

ಬಳಿಕ ಶಾಸಕ ಕೆ.ಎಸ್. ಆನಂದ್ ಆಸ್ಪತ್ರೆಗೆ ಭೇಟಿ ನೀಡಿ ಅಸ್ಪಸ್ಥಗೊಂಡ ರೋಗಿಗಳ ಬಗ್ಗೆ ಆಸ್ಪತ್ರೆಯ ವೈದ್ಯರಿಂದ ಮಾಹಿತಿ ಪಡೆದುಕೊಂಡರು, ಅಸ್ಪಸ್ಥಗೊಂಡು ದಾಖಲಾದ ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಶರತ್ ಕೃಷ್ಣಮೂರ್ತಿ, ತಾಪಂ ಮಾಜಿ ಉಪಾಧ್ಯಕ್ಷ ಭೋಗಪ್ಪ, ವಸಂತ್ ಕುಮಾರ್ , ಶಶಿಕುಮಾರ್, ಕೊನೆಮನೆರವಿ, ಕೃಷ್ಣಪ್ಪ , ರಂಗಪ್ಪ, ಧರ್ಮರಾಜ್ ಹಾಗೂ ಗ್ರಾಮಸ್ಥರು ಇದ್ದರು.

Leave a Reply

Your email address will not be published. Required fields are marked *

error: Content is protected !!