ಸುದ್ದಿ ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಯು.ಪಿ.ಎಸ್.ಸಿ ನಡೆಸಲಿರುವ ಐ.ಎ.ಎಸ್ ಮತ್ತು ಕೆ.ಪಿ.ಎಸ್.ಸಿ ನಡೆಸಲಿರುವ ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಸಲು ನಿರ್ಧರಿಸಿದೆ.
ಆಸಕ್ತರು ನವೆಂಬರ್ 24 ರೊಳಗಾಗಿ ಬೆಳಗ್ಗೆ 10.೦೦ ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಪ್ರೊ. ಕೆ.ಎಲ್.ಎನ್ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.