ನಾಳೆಯಿಂದ ಗ್ರಾಪಂ ಮಟ್ಟದಲ್ಲಿ ಗೃಹಲಕ್ಷ್ಮೀ ಯೋಜನೆ ಸಮಸ್ಯೆಗಳ ಪರಿಹಾರಕ್ಕೆ ಶಿಬಿರ

ಸುದ್ದಿ ಚಿಕ್ಕಮಗಳೂರು : ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಶಿಬಿರಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಡಿಸೆಂಬರ್ 27 ರಿಂದ 29 ರವರೆಗೆ ಮೂರು ದಿನ ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿಶೇಷ ಶಿಬಿರ ಆಯೋಜಿಸಲಾಗಿದೆ.
ಸದರಿ ಶಿಬಿರದಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ  ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದು, ಬ್ಯಾಂಕ್ ಹಾಗೂ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಿಕೊಡಲಿದ್ದಾರೆ ಹಣ ಜಮೆ ಆಗದೇ ಇರುವ ಫಲಾನುಭವಿಗಳು ಸಂಬಂಧಿಸಿದ ಗ್ರಾಮ ಪಂಚಾಯತಿಯಲ್ಲಿ ನಡೆಯುವ ವಿಶೇಷ ಶಿಬಿರದಲ್ಲಿ ಪಾಲ್ಗೊಂಡು ಸಮಸ್ಯೆಗಳನ್ನು ಸರಿಪಡಿಸಿಕೊಂಡು ಈ ಯೋಜನೆಯ ಸೌಲಭ್ಯ ಪಡೆಯುವಂತೆ ಜಿ.ಪಂ. ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!