ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

ಸುದ್ದಿ ಚಿಕ್ಕಮಗಳೂರು:   ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3064 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಜನವರಿ 28 ರ ಬೆಳಿಗ್ಗೆ 11.೦೦ ರಿಂದ 12.30 ಗಂಟೆಯ ವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ.
ಅರ್ಹ ಅಭ್ಯರ್ಥಿಗಳಿಗೆ ಎಸ್‌ಎಂಎಸ್ ಮೂಲಕ ಕರೆಪತ್ರದ ಬಗ್ಗೆ ಎಸ್‌ಎಂಎಸ್ ಮೂಲಕ ಮಾಹಿತಿ ನೀಡಲಾಗುವುದಲ್ಲದೆ. ಕರೆಪತ್ರದ ಲಿಂಕ್‌ಅನ್ನು ಕಳುಹಿಸಲಾಗುವುದು.
ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ಡಿ.ಐ.ಜಿ.ಪಿ. ನೇಮಕಾತಿ ಹಾಗೂ ಸಮನ್ವಯಾಧಿಕಾರಿ ಎ.ಪಿ.ಸಿ. ನೇಮಕಾತಿ ಸಮಿತಿ ಡೈರಕ್ಟರ್ ಜನರಲ್ ಆಫ್ ಪೊಲೀಸ್ ನೇಮಕಾತಿ, ಬೆಂಗಳೂರು ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!