ವಿಜೃಂಭಣೆಯಿಂದ ಜರುಗಿದ ಬಳ್ಳೇಕೆರೆ‌ ಆಂಜನೇಯಸ್ವಾಮಿ ರಥೋತ್ಸವ

ಸುದ್ದಿ ಕಡೂರು : ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಬಳ್ಳೇಕೆರೆ ಆಂಜನೇಯ ಸ್ವಾಮಿಯ ರಥೋತ್ಸವವು ಗುರುವಾರ ಮಧ್ಯಾಹ್ನ 1-30ಕ್ಕೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಬೆಳಗ್ಗೆ ಶ್ರೀ ಸ್ವಾಮಿಯ ದೇವಾಲಯದಲ್ಲಿ ಮೂಲ ದೇವರಿಗೆ ಬಂಗಾರದ ಕವಚವನ್ನು ಸ್ವಾಮಿಗೆ ಸಮರ್ಪಿಸಿ ಹೂವಿನ ಅಲಂಕಾರದೊಂದಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿಸಲಾಯಿತು, ನಂತರ ಸ್ವಾಮಿಯ ಉತ್ಸವ ಮೂರ್ತಿಯನ್ನು ಗ್ರಾಮದಿಂದ ಹೂವಿನ ಪಲ್ಲಕ್ಕಿಯಲ್ಲಿ ವಿವಿಧ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ಮೂಲಕ ದೇವಾಲಯದ ರಥದ ಬಳಿ ಕರೆತಂದು ಅಲಂಕೃತಾ ರಥದಲ್ಲಿ ಸ್ವಾಮಿಯನ್ನು ಪ್ರತಿಷ್ಟಾಪಿಸಿ ನೆರೆದಿದ್ದ ಸಾವಿರಾರು ಭಕ್ತರು ಸ್ವಾಮಿಯ ರಥವನ್ನು ಎಳೆದು ಸಂಭ್ರಮಿಸಿದರು.
ದೇವಾಲಯದ ಸಮಿತಿಯ ವತಿಯಿಂದ ಬಂದಂತಹ ಭಕ್ತಾದಿಗಳಿಗೆ ದಾಸೋಹದ ವ್ಯವಸ್ಥೆ ಕಲ್ಪಿಸಿದ್ದರು. ಹಾಗೂ ಗ್ರಾಮಗಳ ಭಕ್ತರಿಗೆ ಪಾನಕಕೊಸುಂಬರಿ ಪ್ರಸಾದದ ವಿತರಣೆ ನಡೆಯಿತು. ಸುತ್ತಮುತ್ತಲ 10 ಹಳ್ಳಿಗಳ ಗ್ರಾಮದ ಭಕ್ತಾದಿಗಳು ಸೇರಿದಂತೆ ವಿವಿಧ ಭಾಗಗಳಿಂದ ಭಕ್ತಾದಿಗಳು ಜಾತ್ರಾ ಮಹೋತ್ಸವದಲ್ಲಿ ಸುಡುಬಿಸಿಲನ್ನು ಲೆಕ್ಕಿಸದೆ ಭಾಗವಹಿಸಿದ್ದರು.
ಸಂಜೆ ಶ್ರೀ ಸ್ವಾಮಿಯ ಉತ್ಸವ ಮೂರ್ತಿಯನ್ನು ಗ್ರಾಮದಲ್ಲಿ ಅದ್ದೂರಿಯ ಮೆರವಣಿಗೆ ನಡೆಸಿದರು. ನಂತರ ಶನಿಪ್ರಭಾವಳಿಯ ಕುರಿತು ವಿಶೇಷ ನಾಟಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ದೇವಾಲಯದ ಸಮಿತಿಯ ಪದಾಧಿಕಾರಿಗಳು ಮತ್ತಿತರಿದ್ದರು.

 

Leave a Reply

Your email address will not be published. Required fields are marked *

error: Content is protected !!