ಪ್ರಾಚೀನ ದೇವಾಲಯಗಳು ನಮ್ಮ ಸಂಸ್ಕೃತಿಯ ಪ್ರತೀಕ – ಡಾ.ವೀರೇಂದ್ರಹೆಗ್ಗಡೆ

ಸುದ್ದಿ ಕಡೂರು :ಪ್ರಾಚೀನ ದೇವಾಲಯಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿವೆ. ಐತಿಹಾಸಿಕ ದೇವಸ್ಥಾನಗಳನ್ನು ಮೂಲರೂಪದಲ್ಲಿಯೇ ಉಳಿಸಿ ಜೀರ್ಣೋದ್ಧಾರ ಮಾಡುವ ಕಾರ್ಯವನ್ನು ಟ್ರಸ್ಟ್ ನೊಂದಿಗೆ
ಗ್ರಾಮಸ್ಥರ ಸಹಯೋಗದಲ್ಲಿ ಮಾಡಲಾಗಿದೆ. ಇದುವರೆವಿಗೆ 370 ಪ್ರಾಚೀನ
ದೇವಸ್ಥಾನಗಳನ್ನು ಪುನರುತ್ಥಾನಗೊಳಿಸಲಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.
ತಾಲ್ಲೂಕಿನ ಬಿಳುವಾಲ ಗ್ರಾಮದಲ್ಲಿ ಶುಕ್ರವಾರ ಶ್ರೀ ಕಲ್ಲೇಶ್ವರ ಸ್ವಾಮಿ ಸೇವಾ ಸಂಘ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ
ಪುರಾತನ ಕಾಲದ ಶ್ರೀ ಕಲ್ಲೇಶ್ವರಸ್ವಾಮಿ ಮತ್ತು ಪರಿವಾರ ದೇವರುಗಳ ನೂತನ ದೇವಸ್ಥಾನ ಮತ್ತು ವಿಗ್ರಹ ಪ್ರತಿಷ್ಠಾಪನೆ ಮತ್ತು ಕಳಸ ಸ್ಥಾಪನೆ ಶ್ರೀ ಆಂಜನೇಯ ಸ್ವಾಮಿ ದೇವಾಲಯ ಗೋಪುರದ ಕಳಸ ಸ್ಥಾಪನೆಯ ಧಾರ್ಮಿಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ,ಐತಿಹಾಸಿಕ ದೇವಸ್ಥಾನಗಳನ್ನು ಸಂರಕ್ಷಿಸುವ ಮೂಲಕ ಸೈದ್ದಾಂತಿಕ ನೆಲೆಗಟ್ಟಿನಲ್ಲಿ ನಮ್ಮ ಸಂಸ್ಕೃತಿಯ ಪ್ರತೀಕಗಳನ್ನು ಉಳಿಸುವ ಹೊಣೆ ನಮ್ಮೆಲ್ಲರದ್ದಾಗಬೇಕಿದೆ ಎಂದರು.
ಕಲ್ಲೇಶ್ವರಸ್ವಾಮಿ ಸೇವಾ ಸಂಘದ ಅಧ್ಯಕ್ಷ ಬಿ.ಕೆ.ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಹೊಸದುರ್ಗ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ, ಭಗೀರಥಪೀಠದ ಡಾ.ಪುರುಷೋತ್ತಮಾನಂದ ಪುರಿ ಸ್ವಾಮೀಜಿ, ಯಳನಡು ಮಠದ ಜ್ಞಾನಪ್ರಭು ಸಿದ್ದರಾಮದೇಶಿಕೇಂದ್ರ ಸ್ವಾಮೀಜಿ, ಮಾಜಿ ಶಾಸಕ ವೈ.ಎಸ್.ವಿ.ದತ್ತ ಮಾತನಾಡಿದರು. ಧರ್ಮೋತ್ಥಾನ ಟ್ರಸ್ಟ್ ನ ಪ್ರಶಾಂತ್ ಚಿಪ್ರಗುತ್ತಿ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ
ಪ್ರಾದೇಶಿಕ ನಿರ್ದೇಶಕಿ ಗೀತಾ, ಜಿಲ್ಲಾ ನಿರ್ದೇಶಕ ಸದಾನಂದ ಬಂಗೇರಾ, ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ರಾವ್, ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಲಕ್ಷ್ಮಿ,  ಟಿ.ಆರ್.ಲಕ್ಕಪ್ಪ , ಭರತ್ ಕೆಂಪರಾಜು ಇದ್ದರು,

Leave a Reply

Your email address will not be published. Required fields are marked *

error: Content is protected !!