ರಕ್ತದಾನದಂತಹ ಪುಣ್ಯದ ಕಾರ್ಯದಲ್ಲಿ ಭಾಗಿಯಾಗಿ – ಭಂಡಾರಿಶ್ರೀನಿವಾಸ್

ಸುದ್ದಿ ಕಡೂರು : ಜೀವ ರಕ್ಷಣೆಗೆ ಕಾರಣವಾಗುವ ರಕ್ತದಾನದಂತಹ ಪುಣ್ಯದ ಕಾರ್ಯದಲ್ಲಿ ಭಾಗಿಯಾಗುವ ಮೂಲಕ ಸಾಮಾಜಿಕ ಕಾಳಜಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಪುರಸಭಾ ಸದಸ್ಯ ಭಂಡಾರಿಶ್ರೀನಿವಾಸ್ ಹೇಳಿದರು.
ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ, ಐಕ್ಯೂಎಸಿ ವತಿಯಿಂದ ಸೋಮವಾರ ನಡೆದ ರಕ್ತದಾನ ಮತ್ತು ರಕ್ತ ಗುಂಪು ಪರೀಕ್ಷಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಮಾನವನಿಗೆ ಆಕಸ್ಮಿಕ ಸಂದರ್ಭಗಳಲ್ಲಿ ತುರ್ತಾಗಿ ಅಗತ್ಯವಾಗಿ ಬೇಕಾಗುವ ರಕ್ತವು ಅಮೂಲ್ಯ ಜೀವ ಉಳಿಸುವ ವಸ್ತುವಾಗಿದೆ. ಇದನ್ನರಿತು ಯುವಪೀಳಿಗೆ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕಿದೆ. ದಾನಗಳಲ್ಲಿ ರಕ್ತದಾನ ಮಹಾದಾನ, ಜನರ ಜೀವ ರಕ್ಷಣೆಗೆ ರಕ್ತ ಅತ್ಯವಶ್ಯಕವಾಗಿದೆ. ಉತ್ತಮವಾದ ವಾತಾವರಣ ಕಲ್ಪಿಸಲು ಆರೋಗ್ಯ ಅತ್ಯಂತ ಅವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆ ಸೂಕ್ತ ಕಾಳಜಿ ವಹಿಸಬೇಕು. ರಕ್ತದಾನ ಮಾಡಿದರೆ ತಮ್ಮ ದೇಹದ ಕೊಬ್ಬಿನಾಂಶ ಕಡಿಮೆಯಾಗಿ ಹೊಸ ರಕ್ತ ಉತ್ಪತ್ತಿಗೊಳ್ಳಲು ಸಾಧ್ಯವಾಗಲಿದೆ ಎಂದರು.
ಜಿಲ್ಲಾ ಮಲ್ಲೇಗೌಡ ಆಸ್ಪತ್ರೆಯ ರಕ್ತನಿಧಿ ಘಟಕದ ವೈದ್ಯಾಧಿಕಾರಿ ಡಾ. ಮುರುಳಿಧರ್ ಆರೋಗ್ಯದ ಕಾಳಜಿಯ ಕುರಿತು ಮಾತನಾಡಿದರು.  ಕಾಲೇಜಿನ ಪ್ರಾಂಶುಪಾಲ ಡಾ ಕೆ.ಎ. ರಾಜಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಯುವ ರೆಡ್ ಕ್ರಾಸ್ ಸಂಚಾಲಕ ಟಿ.ಕೆ. ತಿಮ್ಮೇಗೌಡ, ಎನ್‌ಎಸ್‌ಎಸ್ ಘಟಕದ ಡಿ. ಅಶೋಕ್‌ಕುಮಾರ್, ಎಚ್.ಎಂ. ಕುಮಾರ್, ಹಿರಿಯ ಪ್ರಾಧ್ಯಾಪಕ ಎಸ್.ಬಿ. ಮಂಜುನಾಥ್, ಐಕ್ಯೂಎಸಿ ಸಂಚಾಲಕ ರಾಘವೇಂದ್ರ ಹಾಗೂ ಕಾಲೇಜಿನ ಉಪನ್ಯಾಸಕ ವರ್ಗದವರು ಇದ್ದರು.

 

Leave a Reply

Your email address will not be published. Required fields are marked *

error: Content is protected !!