ಯಗಟಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರಿಗೆ ಪ್ರಯತ್ನ – ಕೆ.ಎಸ್. ಆನಂದ್

ಸುದ್ದಿ ಕಡೂರು : ತಾಲ್ಲೂಕಿನ ಯಗಟಿ ಗ್ರಾಮಕ್ಕೆ ಕೆಪಿಎಸ್ ಶಾಲೆಯನ್ನು ಮಂಜೂರು ಮಾಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ಕೆ.ಎಸ್. ಆನಂದ್ ತಿಳಿಸಿದರು.
ತಾಲ್ಲೂಕಿನ ಯಗಟಿ ಗ್ರಾಮದಲ್ಲಿ 2019-20ನೇ ಸಾಲಿನ ಪದವಿ ಪೂರ್ವ ಕಾಲೇಜುಗಳಿಗೆ ಮೂಲಭೂತ ಸೌಲಭ್ಯ ಅನುದಾನದ 55ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಲೇಜು ಕಟ್ಟಡ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲ್ಲೂಕಿಗೆ ದೊಡ್ಡ ಹೋಬಳಿ ಕೇಂದ್ರವಾಗಿ ಮಾರ್ಪಟ್ಟಿರುವ ಯಗಟಿ ಭಾಗಕ್ಕೆ ಅಭಿವೃದ್ದಿ ಕಾರ್ಯಗಳನ್ನು ಅನುಷ್ಟಾನಗೊಳಿಸಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಈಗಾಗಲೇ ಗುಣಮಟ್ಟದ ಕಟ್ಟಡ ನಿರ್ಮಾಣವಾಗಿದ್ದು, ಪದವಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಮುಂದೆ ಹೆಚ್ಚುವರಿ ಎರಡು ಕಟ್ಟಡ ನಿರ್ಮಾಣದ ಬೇಡಿಕೆಯನ್ನು ಈಡೇರಿಸಲಾಗುವುದು. ವಾಣಿಜ್ಯ ವಿಭಾಗ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಈ ಹಿಂದಿನ ಜನಪ್ರತಿನಿಧಿಗಳು ಶಿಕ್ಷಣಕ್ಕೆ ಒತ್ತು ನೀಡಿ ಕೆಲಸ ಮಾಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಶರತ್‌ಕೃಷ್ಣಮೂರ್ತಿ, ಭಂಡಾರಿಶ್ರೀನಿವಾಸ್‌, ವೈ.ಎಸ್.‌ ರವಿಪ್ರಕಾಶ್‌, ಯಗಟಿ ಗ್ರಾಪಂ ಅಧ್ಯಕ್ಷೆ ಕಲಾವತಿ ವೆಂಕಟೇಶ್, ಉಪಾಧ್ಯಕ್ಷ ಮೂರ್ತಿ, ಸದಸ್ಯರಾದ ಚನ್ನಪಿಳ್ಳೇಗೋವಿಂದಪ್ಪ, ಜ್ಯೋತಿ, ಗಾಯತ್ರಿ, ಮುಖಂಡರಾದ ವೈ.ಕೆರಂಗಪ್ಪ, ಯರದಕೆರೆ ರಾಜಪ್ಪ, ಡಿ.ಉಮೇಶ್, ಷಣ್ಮುಖಭೋವಿ, ಪ್ರಾಚಾರ್ಯ ರಾಜಪ್ಪ, ಕುಂಕನಾಡು ಓಂಕಾರಮೂರ್ತಿ ಪಿಎಸೈ ರಂಗನಾಥ್ ಮತ್ತಿತರಿದ್ದರು.

Leave a Reply

Your email address will not be published. Required fields are marked *

error: Content is protected !!