ಸುದ್ದಿ ಚಿಕ್ಕಮಗಳೂರು: ಕಾಂಗ್ರೇಸ್ ಪಕ್ಷಕ್ಕೆ ನಾವು ಯಾರನ್ನೂ ಕರೆಯುವುದಿಲ್ಲ. ಆಪರೇಷನ್ ಮಾಡಿ ಸೇರ್ಪಡೆಯನ್ನೂ ಮಾಡಿಕೊಳ್ಳುವುದಿಲ್ಲ. ಹಾಗೆಯೇ ಯಾರಾದರೂ ಕಾಂಗ್ರೆಸ್ ಪಕ್ಷ ಬಿಟ್ಟು ಹೋಗುತ್ತೇವೆ ಎಂದರೆ ಅವರನ್ನು ತಡೆಯುವುದೂ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ಜಗದೀಶ ಶೆಟ್ಟರ್ ಅವರು ಕಾಂಗ್ರೆಸ್ ಸೇರುವಾಗ ಬಿಜೆಪಿಯನ್ನು ಯಾವರೀತಿ ನಿಂದಿಸಿದ್ದರು ಎಂಬುದು ಎಲ್ಲರಿಗೂ ಗೊತ್ತಿದೆ. ಅದೇ ರೀತಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರುವಾಗ ಕಾಂಗ್ರೆಸ್ ಬಗ್ಗೆ ಒಳ್ಳೆಯ ರೀತಿಯಲ್ಲೇ ಮಾತನಾಡಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಸಿದರು.