ಹಸಿರು ಪಟಾಕಿ ಬಳಸಿ

ಸುದ್ದಿ ಚಿಕ್ಕಮಗಳೂರು: ದೀಪಾವಳಿ ಹಬ್ಬದ ಸಂದರ್ಭ ಸಾರ್ವಜನಿಕರ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯವನ್ನು ನಿಯಂತ್ರಣದಲ್ಲಿಡುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿ ಮದ್ದುಗಳನ್ನು ಮಾರಾಟ ಮಾಡುವುದು ಅಥವಾ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ.
ಸಾರ್ವನಿಕರು 125 ಡೆಸಿಬಲ್‌ಗಿಂತ ಹೆಚ್ಚಿನ ಶಬ್ದ ಉಂಟು ಮಾಡುವ ಪಟಾಕಿ ಹಾಗೂ ಸಿಡಿ ಮದ್ದುಗಳನ್ನು ಉಪಯೋಗಿಸಬಾರದು. ಅಲ್ಲದೆ ರಾತ್ರಿ 8.೦೦ ಗಂಟೆ ಯಿಂದ ರಾತ್ರಿ 10.೦೦ ಗಂಟೆಯ ವರೆಗೆ ಮಾತ್ರ ಪಟಾಕಿಗಳನ್ನು ಸ್ಪೋಟಿಸಲು ಅವಕಾಶವಿದ್ದು, ಯಾವುದೇ ಸಮಯದಲ್ಲಿ ನಿಶ್ಯಬ್ದ ವಲಯಗಳೆಂದು ಘೋಷಿಸಲ್ಪಟ್ಟಿರುವ ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ, ವೃದ್ಧಾಶ್ರಮಗಳ ಸುತ್ತಮುತ್ತಲಲ್ಲಿ ಶಬ್ದವುಂಟು ಮಾಡುವ ನಿಷೇಧಿತ ಪಟಾಕಿ ಸಿಡಿ ಮದ್ದುಗಳನ್ನು ಬಳಸಬಾರದು, ಹಸಿರು ಪಟಾಕಿಗಳನ್ನು ಮಾತ್ರ ಬಳಸಲು ಸರ್ವೋಚ್ಚ ನ್ಯಾಯಾಲಯವು ಅನುಮತಿ ನೀಡಿದೆ.
ಮೇಲ್ಕಂಡ ಯಾವುದೇ ಕ್ರಮಗಳನ್ನು ಉಲ್ಲಂಘಿಸಿರುವುದು ಕಂಡು ಬಂದಲ್ಲಿ ಅದಕ್ಕೆ ಕಾರಣರಾದವರ ವಿರುದ್ಧ ಕಾಯ್ದೆಯನುಸಾರ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!