ಕಾಡಾನೆ ಧಾಳಿಗೆ ಯುವತಿ ಬಲಿ

ಸುದ್ದಿ ಚಿಕ್ಕಮಗಳೂರು : ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಹಾವಳಿಗೆ ಯುವತಿಯೋರ್ವಳು ಸಾವೀಗಿಡಾಗಿರುವ ಘಟನೆ ಆಲ್ದೂರು ಅರಣ್ಯ ವ್ಯಾಪ್ತಿಯ ಹೆಡದಾಳು ಗ್ರಾಮದಲ್ಲಿ ಬುಧವಾರ ಘಟನೆ ನಡೆದಿದೆ.
ಕಾಫಿ ತೋಟದ ಕೆಲಸಕ್ಕೆಂದು ಹೊರಟಿದ್ದ
ವೀಣಾ (45,) ಕಾಡಾನೆಯ ದಾಳಿಗೆ ಮೃತಪಟ್ಟ ದುರ್ದೈವಿಯಾಗಿದ್ದು, ಕಳೆದ ಎರಡು ತಿಂಗಳಲ್ಲಿ ಎರಡನೇ ಬಲಿ ಇದಾಗಿದೆ‌.
ಘಟನೆ ಸಂಬಂಧ
ಆನೆಗಳನ್ನ ಸ್ಥಳಾಂತರಿಸುವಂತೆ ಸ್ಥಳೀಯರು
ಪ್ರತಿಭಟನೆ ನಡೆಸಿ, ಆಗ್ರಹಿಸುತ್ತಾ
ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ‌.
ಆಲ್ದೂರು ವಲಯದ ಅರಣ್ಯದಲ್ಲಿ ಬೀಡು ಬಿಟ್ಟಿರೋ 7 ಕಾಡಾನೆಗಳ ಹಿಂಡು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಸ್ಥಳಕ್ಕೆ ಆಲ್ದೂರು ಅರಣ್ಯ ಅಧಿಕಾರಿಗಳ ಭೇಟಿ ನೀಡಿದ್ದಾರೆ.
ರಸ್ತೆ ತಡೆದು ಪ್ರತಿಭಟನೆ: ಕಾಡಾನೆ ದಾಳಿಗೆ ಮೃತಪಟ್ಟ ಮಹಿಳೆ ಹಿನ್ನೆಲೆಯಲ್ಲಿ ಸ್ಥಳೀಯರು
ರಾಜ್ಯ ಹೆದ್ದಾರಿ ತಡೆದು ಅರಣ್ಯ ಇಲಾಖೆ ವಿರುದ್ಧ ಸ್ಥಳಿಯರ ಆಕ್ರೋಶ ಹೊರಹಾಕುತ್ತಿದ್ದಾರೆ‌.
ಚಿಕ್ಕಮಗಳೂರು-ಶೃಂಗೇರಿ ಮಾರ್ಗದ ರಸ್ತೆ ಮಧ್ಯೆ ಪ್ರತಿಭಟನೆ ನಡೆಸಲಾಗುತ್ತಿದ್ದು,
ಸ್ಥಳಕ್ಕೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಭೇಟಿ ನೀಡಿದ ಹಿನ್ನೆಲೆಯಲ್ಲಿ ಶಾಸಕಿಯ ಎದುರು ಅರಣ್ಯ ಅಧಿಕಾರಿಗಳ ವಿರುದ್ಧ ಸ್ಥಳೀಯರು ಕಿಡಿಕಾರಿದರು. 2 ತಿಂಗಳ ಹಿಂದೆ ಅರೆನೂರು ಬಳಿ ಚಿನ್ನಿ ಎಂಬುವರಿಗೆ ಕಾಡಾನೆಗೆ ಬಲಿಯಾಗಿದ್ದರು
ನಿಮಗೆ ಇನ್ನೆಷ್ಟು ಬಲಿ ಬೇಕು, ನ್ಯಾಯ ಸಿಗುವವರೆಗೂ  ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!