ಸುದ್ದಿ ಚಿಕ್ಕಮಗಳೂರು : ರಾಜ್ಯ ರಾಜಕಾರಣದಲ್ಲಿ ಹೊಸ ಹೊಸ ವಿದ್ಯಮಾನಗಳು ಬೆಳವಣಿಗೆಯಾಗುತ್ತಿರುವ ಬೆನ್ನಲ್ಲೇ
ಕಾಫಿನಾಡು ಚಿಕ್ಕಮಗಳೂರಿನ ರೆಸಾರ್ಟ್ ನಲ್ಲಿ ಜೆಡಿಎಸ್ ಪಕ್ಷದ ಶಾಸಕರುಗಳು ಮತ್ತು ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕ ಹೆಚ್.ಡಿ ಕುಮಾರಸ್ವಾಮಿ ವಾಸ್ತವ್ಯ ಹೂಡಲಿದ್ದಾರೆ ಎಂಬ ಮಾಹಿತಿ ಜೆಡಿಎಸ್ ಪಕ್ಷದ ಮೂಲಗಳಿಂದ ಲಭ್ಯವಾಗಿದೆ.
ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಅವರ ಮಗಳ ಮದುವೆಯ ನಿಶ್ಚಿತಾರ್ಥ ಕಾರ್ಯಕ್ರಮ ಇದೇ ತಿಂಗಳ ನವೆಂಬರ್ 19 ರಂದು ನಿಗದಿಯಾಗಿದೆ. ಇದರಲ್ಲಿ ಪಾಲ್ಗೊಳ್ಳುವ ನೆಪದಲ್ಲಿ ತಮ್ಮ ಪಕ್ಷದ ಶಾಸಕರನ್ನು ಕುಮಾರಸ್ವಾಮಿ ಚಿಕ್ಕಮಗಳೂರಿಗೆ ಆಹ್ವಾನಿಸಿದ್ದಾರೆ ಎನ್ನಲಾಗುತ್ತಿದೆ.
ಚಿಕ್ಕಮಗಳೂರಿನ ರೆಸಾರ್ಟ್ ನಲ್ಲಿ ಮೂರು ದಿನಗಳ ಕಾಲ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ಶಾಸಕರು ವಾಸ್ತವ್ಯ ಹೂಡಲಿದ್ದಾರೆ. ನವೆಂಬರ್ 17 ರ ಮಧ್ಯಾಹ್ನ ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ಗೆ ಶಾಸಕರು ಆಗಮಿಸಲಿದ್ದಾರೆ. ನವೆಂಬರ್ 18 ರಂದು ಶಾಸಕರ ಜೊತೆ ಕುಮಾರಸ್ವಾಮಿ ಸಭೆ ನಡೆಸಲಿದ್ದಾರೆ. ನ.19 ರಂದು ಸಿಲ್ವರ್ ಗೇಟ್ ರೆಸಾರ್ಟ್ ನಲ್ಲಿ ನಡೆಯುವ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅವರ ಮಗಳ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಶಾಸಕರು ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ದಿಸುದ್ದಿ.ಕಾಂ ಗೆ ಲಭ್ಯವಾಗಿದೆ.