ದತ್ತಮಾಲೆ ಹಾಕಿಕೊಂಡು ಸಿದ್ದರಾಮಯ್ಯನವರು ಬರಲಿ – ಸಿ.ಟಿ.ರವಿ

ಸುದ್ದಿ ಚಿಕ್ಕಮಗಳೂರು : ಕುಮಾರಸ್ವಾಮಿ ಜೊತೆ ಸಿದ್ದರಾಮಯ್ಯನವರು ದತ್ತಪೀಠಕ್ಕೆ ಬರಲಿ ಸಿಎಂ ಸಿದ್ದರಾಮಯ್ಯನವರಿಗೆ ಮಾಜಿ ಶಾಸಕ ಸಿ.ಟಿ.ರವಿ ಮನವಿ ಮಾಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದು ಎಂದು ಹೇಳಿಕೊಳ್ಳಲು ಗರ್ವ ಪಡಬೇಕು, ಸಮಾಜ ಇದನ್ನೇ ಕೇಳೋದು ಮಾಜಿ ಸಿಎಂ ಹೆಚ್ಡಿಕೆ ಹೇಳಿಕೆ ಸಿಎಂ ಸಿದ್ದರಾಮಯ್ಯನವರಿಗೂ ಮಾದರಿ ನಾನು ಹಿಂದೂ ಅಲ್ವಾ, ನನ್ನ ಹೆಸರಲ್ಲೇ ಸಿದ್ರಾಮ ಇದ್ದಾನೆ ಎಂದಿದ್ದಾರೆ, ನೀವು ಮಾಲೆ ಹಾಕಿಕೊಂಡು ಬಂದರೆ ನಮ್ಮ ಸತ್ಯದ ಹೋರಾಟಕ್ಕೆ ಬಲ ಬರಲಿದೆ ನೀವು ಮಾಲೆ ಹಾಕಿದೆ ಮೇಲೆ ಜಮೀರ್ ಅವರು ಮಾಲೆ ಹಾಕೇ ಹಾಕುತ್ತಾರೆ ಆಗ 5 ದಶಕದ ಹೋರಾಟಕ್ಕೆ ಬಲ ಬರುತ್ತೆ, ಸತ್ಯವನ್ನ ಎತ್ತಿ ಹಿಡಿದಂತಾಗುತ್ತೆ. ನಮ್ಮ ಧರ್ಮದ ಪ್ರಕಾರ ನಡೆದುಕೊಳ್ಳಲು ಯಾರಿಗೆ ಏಕೆ ಹೆದರಬೇಕು? ಯಾರೂ ಎಲೆಕ್ಷನ್ ಟೈಂ ಹಿಂದೂಗಳಾಗಬಾರದು, ಜೀವನ ಪರ್ಯಂತ ಹಿಂದೂಗಳಾಬೇಕು ಹಿಂದುತ್ವದ ವಿಚಾರ ಬಂದಾಗ ಹಿಂದೆ ನೋಡಲೇಬಾರದು, ಮುಂದಕ್ಕೆ ನೋಡಬೇಕು  ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬರಲಿ ಎಂದು ಮನವಿ ಮಾಡುತ್ತೇನೆ.

 

Leave a Reply

Your email address will not be published. Required fields are marked *

error: Content is protected !!