3ವರ್ಷದಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಆರಂಭಿಸಲಾಗುವುದು – ಮಧುಬಂಗಾರಪ್ಪ

ಸುದ್ದಿ ಚಿಕ್ಕಮಗಳೂರು : ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯದ 6 ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಮೂರು  ವರ್ಷದೊಳಗೆ ಮೂರು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು ಎಂದು ಶಿಕ್ಷಣ  ಸಚಿವ ಮಧು ಬಂಗಾರಪ್ಪ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಸೋಮವಾರ ಬಾಳೆಹೊನ್ನೂರಿನ ಸರಕಾರಿ  ಸ್ವತಂತ್ರ ಪದವಿ ಪೂರ್ವ ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನಾ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಂದಿನ ವರ್ಷ 500 ರಿಂದ 600 ಕೆಪಿಎಸ್ ಶಾಲೆಗಳನ್ನು ಆರಂಭಿಸಲಾಗುವುದು ಖಾಸಗಿ ಶಾಲೆಗಳಲ್ಲಿರುವ ರೀತಿ ಕೆಪಿಎಸ್ ಶಾಲೆಗಳಲ್ಲೂ ಸಂಗೀತ ಸೇರಿದಂತೆ ಎಲ್ಲಾ ರೀತಿಯ ಸಾಂಸ್ಕೃತಿಕ ಶಿಕ್ಷಣದ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದರು.

ಕೆಪಿಎಸ್ ಶಾಲೆಗಳಲ್ಲಿ ಎಲ್ ಕೆ ಜಿ ಯಿಂದ 12ನೇ ತರಗತಿ ವರೆಗೆ ತರಗತಿಗಳನ್ನು ಆರಂಭಿಸಲಾಗುವುದು ಸಿ ಎಸ್ ಆರ್ ಐ ಫಂಡ್ ನಿಂದ 175 ತಾಲ್ಲೂಕುಗಳಲ್ಲಿ ಪ್ರತಿ ಎಂಎಲ್ಎ ಕ್ಷೇತ್ರಕ್ಕೆ 5 ರಿಂದ 6 ಕೆಪಿಎಸ್ ಶಾಲೆಗಳನ್ನು ನೀಡಲಾಗುವುದು ವಿದ್ಯಾರ್ಥಿಗಳನ್ನು ಮತ್ತು ಪೋಷಕರನ್ನು ಸೆಳೆಯುವ ನಿಟ್ಟಿನಲ್ಲಿ ಎಲ್ಲಾ ಶಾಲೆಗಳನ್ನು ಸುಸಜ್ಜಿತಗೊಳಿಸಿ ಮೇಲ್ರ‍್ಜೆಗೇರಿಸಲಾಗುವುದು ಎಂದು ತಿಳಿಸಿದ ಅವರು ಒಂದೇ ಜಾಗದಲ್ಲಿ ಮಕ್ಕಳಿಗೆ ಶಿಕ್ಷಣ ದೊರಕಿಸಿಕೊಡಲು ಅತ್ಯಂತ ಸುಸಜ್ಜಿತ ಮತ್ತು ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒಳಗೊಂಡ ಕೆಪಿಎಸ್ ಶಾಲೆಗಳನ್ನು ತೆರೆಯಲಾಗುವುದು, ಇತ್ತೀಚೆಗಷ್ಟೇ 13 ಸಾವಿರ ಶಿಕ್ಷಕರನ್ನು ನೇಮಕ ಮಾಡುವ ಮೂಲಕ ಶಿಕ್ಷಕರ ಕೊರತೆಯನ್ನು ನಿವಾರಿಸಲಾಗಿದ್ದು ಅಗತ್ಯ ಕಂಡು ಬಂದಲ್ಲಿ ಇನ್ನಷ್ಟು ಹೆಚ್ಚುವರಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಅನುದಾನಿತ, ಅನುದಾನ, ರ‍್ಕಾರಿ ಶಾಲೆಗಳು ಸೇರಿದಂತೆ ರಾಜ್ಯದಲ್ಲಿ ಒಂದು ಕೋಟಿ ಇಪ್ಪತ್ತು ಲಕ್ಷ ಶಾಲೆಗಳಿವೆ ಮೂರುವರೆ ಲಕ್ಷ ಶಿಕ್ಷಕರು ಕರ‍್ಯನರ‍್ವಹಿಸುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಬಹುದೊಡ್ಡ ಇಲಾಖೆಯಾಗಿದೆ ಆ ಇಲಾಖೆಯನ್ನು ಸರ‍್ಥವಾಗಿ ನಿಭಾಯಿಸುತ್ತಾರೆ ಎಂಬ ನಂಬಿಕೆ ಮತ್ತು ವಿಶ್ವಾಸದಿಂದ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ತಮಗೆ ಈ ಇಲಾಖೆಯನ್ನು ನೀಡಿದ್ದಾರೆ ಅವರ ನಂಬಿಕೆಯನ್ನು ಹುಸಿಗೊಳಿಸದೆ ಕರ‍್ಯನರ‍್ವಹಿಸುತ್ತೇನೆ ಮುಂದಿನ ಮೂರು ರ‍್ಷದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡುತ್ತೇನೆ ರ‍್ಕಾರಿ ಶಾಲೆಗಳಿಗೆ ಮಕ್ಕಳು ಬಂದು ಓದುವಂತಹ ವ್ಯವಸ್ಥೆಯನ್ನು ನಿರ್ಮಾಣ ಮಾಡುತ್ತೇನೆ ಎಂದು ತಿಳಿಸಿದರು
ಜಿಲ್ಲಾ ಉಸ್ತುವಾರಿ ಸಚಿವ ಕೆಜೆ ಜಾರ್ಜ್ ಮಾತನಾಡಿ ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಅಡಿ ಒಂದು ಕೋಟಿ ಐವತ್ತೊಂದು ಲಕ್ಷ ಫಲಾನುಭವಿಗಳಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ ಅದಕ್ಕಿಂತ ಜಾಸ್ತಿ ಬಳಸಿದವರಿಗೆ ಮಾತ್ರ ಹೆಚ್ಚುವರಿ ಬಳಕೆಯ ಹಣಕ್ಕೆ ಬಿಲ್ ನೀಡಲಾಗುತ್ತಿದೆ ಎಂದು ತಿಳಿಸಿದರು.
ಕಾಫಿ ಪಲ್ಪಿಂಗ್ ಗೆ ತೊಂದರೆಯಾಗದಂತೆ ತಡೆರಹಿತ ವಿದ್ಯುತ್ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದ ಅವರು ಸಣ್ಣ ರೈತರು ಬಾಕಿ ಉಳಿಸಿಕೊಂಡಿರುವ ವಿದ್ಯುತ್ ಬಿಲ್ ನ ಅಸಲನ್ನು ಪಾವತಿಸಿದರೆ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ತಿಳಿಸಿದರು.

ಸರಕಾರಿ ಶಾಲೆಗಳೊಂದಿಗೆ ದಾನಿಗಳು ಕೈಜೋಡಿಸಿದರೆ ಆ ಶಾಲೆಗಳು ಬೆಳೆಯುತ್ತವೆ ಎಂದ ಸಚಿವರು ಶಾಸಕ ಟಿ.ಡಿ ರಾಜೇಗೌಡರ ಮನವಿಯ ಮೇರೆಗೆ ಈ ಶಾಲೆಗೆ ಕಾಂಪೌಂಡ್ ನಿರ್ಮಾಣ ಮಾಡಿಕೊಡಲಾಗುವುದು ಜಿಲ್ಲೆಯ ಎಲ್ಲಾ ಶಾಸಕರ ಮನವಿಗಳಿಗೂ ಸ್ಪಂದಿಸಲಾಗುವುದು ಎಂದು ಭರವಸೆ ನೀಡಿದರು.

ಶಾಸಕ ಟಿ.ಡಿ ರಾಜೇಗೌಡರು ಮಾತನಾಡಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್‌ ಅವರ ಉತ್ಸುಕತೆ ಮತ್ತು ಕಾರ‍್ಯವೈಖರಿಯಿಂದಾಗಿ ಜಿಲ್ಲೆಯಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸಗಳಾಗುತ್ತಿವೆ. ತಮ್ಮ ಕ್ಷೇತ್ರದಲ್ಲೂ ಬಹಳಷ್ಟು ಸಮಸ್ಯೆಗಳು ನಿವಾರಣೆಯಾಗುತ್ತಿವೆ ಎಂದು ಹೇಳಿದರು.

ಕಾರ‍್ಯಕ್ರಮದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪುಟ್ಟ ನಾಯ್ಕ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಯಪ್ರಕಾಶ, ಸದಸ್ಯರಾದ ರಂಜಿತ ಹಾಗೂ ಶಾಲೆಯ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

error: Content is protected !!