ಸುದ್ದಿಕಡೂರು : ಅಜ್ಜಂಪುರ ತಾಲ್ಲೂಕಿನ ಸೊಲ್ಲಾಪುರ ಗ್ರಾಮದ ಯುವಕನೋರ್ವ ಕಡೂರು-ಬಳ್ಳೇಕೆರೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿದ್ದು, ಕಿರಣ್(20) ಮೃತಪಟ್ಟ ದುರ್ದೈವಿಯಾಗಿದ್ದು, ತಿಪಟೂರಿನ ಕಾಲೇಜುವೊಂದರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡುತ್ತಿದ್ದು, ಮಂಗಳವಾರ ಮಧ್ಯಾಹ್ನದ ಸಂದರ್ಭದಲ್ಲಿ ಕಡೂರು ಮಾರ್ಗದಿಂದ ಚಲಿಸುತ್ತಿದ್ದ ರೈಲಿಗೆ ಸಿಲುಕಿದ್ದು, ಯುವಕನ ದೇಹ ತುಂಡರಿಸಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬೀರೂರು ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆಯನ್ನು ಕೈಗೊಂಡು ಅರಸೀಕೆರೆಯ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.